Categories: ದೆಹಲಿ

ನ್ಯಾಯಬೆಲೆ ಅಂಗಡಿಯಲ್ಲೂ ಸಿಗುತ್ತೆ ಸಣ್ಣ LPG ಸಿಲಿಂಡರ್

ನವದೆಹಲಿ : ಸಣ್ಣ LPG ಸಿಲಿಂಡರ್‌ಗಳನ್ನ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಮಾರಾಟ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. IOCL ಮತ್ತು BPCL ನಂತಹ ತೈಲ ಮಾರುಕಟ್ಟೆ ಕಂಪನಿಗಳ ಪ್ರತಿನಿಧಿಗಳು ಪಡಿತರ ಅಂಗಡಿಗಲ್ಲಿ ಸಣ್ಣ LPG ಸಿಲಿಂಡರ್‌ಗಳ ಚಿಲ್ಲರೆ ಮಾರಾಟ ಮಾಡುವ ಕೇಂದ್ರದ ಪ್ರಸ್ತಾಪವನ್ನು ಶ್ಲಾಘಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೆ ಅವಕಾಶ ನೀಡಲು ಮತ್ತು ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ನೀಡಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಗಳೊಂದಿಗಿನ ಪ್ರತಿನಿಧಿಗಳ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ, ಹಣಕಾಸು ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(ಐಒಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಹೆಚ್‌ಪಿಸಿಎಲ್) ಹಾಗೂ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್(ಸಿಎಸ್‌ಸಿ) ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯ ನಂತರ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೇಳಿಕೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಆರ್ಥಿಕ ಕಾರ್ಯಸಾಧ್ಯತೆ ಹೆಚ್ಚಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡಿತರ ಅಂಗಡಿಗಳ ಮೂಲಕ ಮಾರುವ ಚಿಲ್ಲರೆ ಮಾರಾಟದ ಯೋಜನೆ ರೂಪಿಸಬೇಕೆಂದು ಹೇಳಲಾಗಿದೆ.

ಬಂಡವಾಳ ವೃದ್ಧಿಗಾಗಿ ಪಡಿತರ ವಿತರಕರಿಗೆ ಮುದ್ರಾ ಸಾಲವನ್ನು ವಿಸ್ತರಿಸಲು ಸರ್ಕಾರ ಯೋಜಿಸುತ್ತಿದೆ. ದೇಶದಲ್ಲಿ ಸುಮಾರು 5.26 ಲಕ್ಷ ನ್ಯಾಯಬೆಲೆ ಅಂಗಡಿಗಳಿದ್ದು, ಅವುಗಳ ಮೂಲಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡ ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎನ್ನಲಾಗಿದೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago