News Karnataka Kannada
Friday, May 03 2024
ದೆಹಲಿ

ಪಂಜಾಬ್ ವಿಧಾನಸಭಾ ಚುನಾವಣೆ: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಭಗವಂತ್ ಮಾನ್ ಹೆಸರು ಘೋಷಣೆ

ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​​ ಅವರಿಗೆ ವಿಚಾರಣೆ ನಡೆಸಿ ಜಾಮೀನು ನೀಡಿದೆ.
Photo Credit :

ನವದೆಹಲಿ : ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಭಗವಂತ್ ಮಾನ್ ಆಪ್ ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ( ಜನವರಿ 18) ಘೋಷಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಮತದಾರರೇ ಸೂಚಿಸಬೇಕೆಂಬ ಎಂಬ ಪ್ರಚಾರಾಂದೋಲನದಲ್ಲಿ ಸುಮಾರು 22 ಲಕ್ಷಕ್ಕೂ ಅಧಿಕ ಮಂದಿ ನೀಡಿರುವ ಪ್ರತಿಕ್ರಿಯೆಯ ಆಧಾರದ ಮೇಲೆ ಭಗವಂತ್ ಮಾನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಭಗವಂತ್ ಮಾನ್ ಪಂಜಾಬ್ ನ ಸಂರ್ಗೂರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಪಂಜಾಬ್ ನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುವಂತೆ ಕೇಜ್ರಿವಾಲ್ ಜನವರಿ 13ರಂದು ಮನವಿ ಮಾಡಿಕೊಂಡಿದ್ದು, ಈ ಉದ್ದೇಶಕ್ಕಾಗಿ ಮೊಬೈಲ್ ನಂಬರ್ ಅನ್ನು ಪ್ರಕಟಿಸಿದ್ದರು.

ಪಂಜಾಬ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಆಮ್ ಆದ್ಮಿ ಪಕ್ಷ ಮಾತ್ರವೇ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿದೆ. ಇನ್ನುಳಿದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಯಾವ ಪಕ್ಷವೂ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹರ್ಪಾಲ್ ಸಿಂಗ್ ಚೀಮಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು