News Karnataka Kannada
Monday, April 29 2024
ದೆಹಲಿ

ಪಠ್ಯಪುಸ್ತಕ ವಿಮರ್ಶೆಯನ್ನು ಕನ್ನಡದಲ್ಲಿ ಟ್ವೀಟ್‌ ಮೂಲಕ ಟೀಕಿಸಿದ ರಾಹುಲ್ ಗಾಂಧಿ!

Conspiracy in Congress to end Rahul Gandhi's political career
Photo Credit :

ದೆಹಲಿ: ಕನ್ನಡದಲ್ಲಿ ಸರಣಿ ಟ್ವೀಟ್‌ಗಳ ಮೂಲಕ ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಕಾರ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ.

ಡಾ. ಬಿ ಆರ್ ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.

ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ.

ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು