ನವದೆಹಲಿ: ಪಾಕಿಸ್ತಾನದಲ್ಲಿ ಮಹಾರಾಜ ರಂಜಿತ್ ಸಿಂಗ್ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿರುವ ಬಿಜೆಪಿ ಕಾರ್ಯಕರ್ತರು ದೆಹಲಿಯ ಪಾಕ್ ಹೈಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಕ್ಷಮೆ ಕೇಳುವಂತೆ ಆಗ್ರಹಿಸಿದಲ್ಲದೆ , ಯುವ ಮೋರ್ಚಾ, ಪೂರ್ವಾಂಚಲ್ ಮೋರ್ಚಾ ಮತ್ತು ಬಿಜೆಪಿ ದೆಹಲಿಯ ಸಿಖ್ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ‘ಇಮ್ರಾನ್ ಖಾನ್ ಅವರು ಹಿಂದೂ ಮತ್ತು ಸಿಖ್ಖರ ಮೇಲಿನ ಕಿರುಕುಳ ನಿಲ್ಲಿಸುವ ಜೊತೆಗೆ ದೇಗುಲ ಮತ್ತು ವಿಗ್ರಹಗಳನ್ನು ಅಪವಿತ್ರಗೊಳಿಸುವುದಿಲ್ಲ ಎಂಬ ಭರವಸೆಯನ್ನು ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್ ಕೋಟೆಯಲ್ಲಿದ್ದ ಸಿಖ್ ದೊರೆ ಮಹಾರಾಜ ರಂಜಿತ್ ಸಿಂಗ್ ಅವರ ಒಂಬತ್ತು ಅಡಿ ಎತ್ತರದ ಪ್ರತಿಮೆಯನ್ನು ಮಂಗಳವಾರ ಧ್ವಂಸಗೊಳಿಸಲಾಗಿತ್ತು.
ಪಾಕಿಸ್ಥಾನದಲ್ಲಿ ಮಹಾರಾಜ ರಂಜೀತ್ ಸಿಂಗ್ ಪ್ರತಿಮೆ ಭಗ್ನ ; ಬಿಜೆಪಿ ಪ್ರತಿಭಟನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.