ದೆಹಲಿ

ಪಾಕಿಸ್ಥಾನದಲ್ಲಿ ಮಹಾರಾಜ ರಂಜೀತ್‌ ಸಿಂಗ್‌ ಪ್ರತಿಮೆ ಭಗ್ನ ; ಬಿಜೆಪಿ ಪ್ರತಿಭಟನೆ

ನವದೆಹಲಿ: ಪಾಕಿಸ್ತಾನದಲ್ಲಿ ಮಹಾರಾಜ ರಂಜಿತ್ ಸಿಂಗ್‌ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿರುವ ಬಿಜೆಪಿ ಕಾರ್ಯಕರ್ತರು ದೆಹಲಿಯ ಪಾಕ್‌ ಹೈಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಕ್ಷಮೆ ಕೇಳುವಂತೆ ಆಗ್ರಹಿಸಿದಲ್ಲದೆ , ಯುವ ಮೋರ್ಚಾ, ಪೂರ್ವಾಂಚಲ್ ಮೋರ್ಚಾ ಮತ್ತು ಬಿಜೆಪಿ ದೆಹಲಿಯ ಸಿಖ್‌ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ‘ಇಮ್ರಾನ್‌ ಖಾನ್‌ ಅವರು ಹಿಂದೂ ಮತ್ತು ಸಿಖ್ಖರ ಮೇಲಿನ ಕಿರುಕುಳ ನಿಲ್ಲಿಸುವ ಜೊತೆಗೆ ದೇಗುಲ ಮತ್ತು ವಿಗ್ರಹಗಳನ್ನು ಅಪವಿತ್ರಗೊಳಿಸುವುದಿಲ್ಲ ಎಂಬ ಭರವಸೆಯನ್ನು ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್ ಕೋಟೆಯಲ್ಲಿದ್ದ ಸಿಖ್ ದೊರೆ ಮಹಾರಾಜ ರಂಜಿತ್ ಸಿಂಗ್ ಅವರ ಒಂಬತ್ತು ಅಡಿ ಎತ್ತರದ ಪ್ರತಿಮೆಯನ್ನು ಮಂಗಳವಾರ ಧ್ವಂಸಗೊಳಿಸಲಾಗಿತ್ತು.

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

11 hours ago