Categories: ದೆಹಲಿ

‘ಪೋಕ್ಸೊ’ ಕಾಯ್ದೆಯಡಿ ಪ್ರಕರಣ ಹಿನ್ನೆಲೆ, ಬಾಂಬೆ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವೆ ನೇರವಾಗಿ ‘ಚರ್ಮದಿಂದ ಚರ್ಮದ ಸ್ಪರ್ಶ’ ಆಗಿಲ್ಲದಿದ್ದರೆ, ಅದು ‘ಪೋಕ್ಸೊ’ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಉದ್ದೇಶಕ್ಕಾಗಿ ‘ಪೋಕ್ಸೊ’ (ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣಾ ಕಾಯ್ದೆ) ರೂಪಿಸಲಾಗಿದೆಯೇ ಹೊರತು, ಮಗುವಿನೊಂದಿಗೆ ಚರ್ಮದಿಂದ ಚರ್ಮ ಸ್ಪರ್ಶವಾಗಿದೆಯೇ ಎಂಬುದಕ್ಕಲ್ಲ ಎಂದು ಹೇಳಿತು.

ಅಪರಾಧಿಯನ್ನು ಕಾನೂನಿನ ಜಾಲಗಳಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದು ಕಾನೂನಿನ ಉದ್ದೇಶವಲ್ಲ ಎಂದು ನ್ಯಾಯಪೀಠ ತಿಳಿಸಿತು. ‘ಶಾಸಕಾಂಗವು ಸ್ಪಷ್ಟ ಉದ್ದೇಶವನ್ನು ವ್ಯಕ್ತಪಡಿಸಿದಾಗ, ನ್ಯಾಯಾಲಯಗಳು ನಿಬಂಧನೆಯಲ್ಲಿ ಅಸ್ಪಷ್ಟತೆಯನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸಿದ್ದೇವೆ. ಅಸ್ಪಷ್ಟತೆಯನ್ನು ಸೃಷ್ಟಿಸುವಲ್ಲಿ ನ್ಯಾಯಾಲಯಗಳು ಅತಿಯಾದ ಉತ್ಸಾಹ ತೋರಬಾರದು’ ಎಂದು ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೂ ಒಳಗೊಂಡ ಪೀಠ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ‌ಅಟಾರ್ನಿ ಜನರಲ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಸಲ್ಲಿಸಿದ್ದ ಪ್ರತ್ಯೇಕ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಪೋಕ್ಸೊ ಕಾಯ್ದೆಯಡಿ ಆರೋಪಿಯೊಬ್ಬರನ್ನು ಖುಲಾಸೆಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಜನವರಿ 27ರಂದು ತಡೆಯಾಜ್ಞೆ ನೀಡಿತ್ತು.

ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಕಲಂ 354ರ ಅಡಿಯಲ್ಲಿ ವ್ಯಕ್ತಿಯೊಬ್ಬನಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸೆಷನ್ಸ್ ನ್ಯಾಯಾಲಯ ವಿಧಿಸಿತ್ತು. ಈ ಕುರಿತು ಬಾಂಬೆ ಹೈಕೋರ್ಟ್‌ನಲ್ಲಿ ಆರೋಪಿ ಮೇಲ್ಮನವಿ ಸಲ್ಲಿಸಿದ್ದರು. ಐಪಿಸಿ ಕಲಂ 354ರ ಅಡಿಯಲ್ಲಿ ಆರೋಪಿಗೆ ನೀಡಿದ್ದ ಶಿಕ್ಷೆಯನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌, ಪೋಕ್ಸೊ ಕಾಯ್ದೆಯಡಿಯ ಪ್ರಕರಣದಿಂದ ಆರೋಪಿಯನ್ನು ಖುಲಾಸೆಗೊಳಿಸಿತು.

Gayathri SG

Recent Posts

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

7 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

17 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

34 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

45 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

60 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago