Categories: ದೆಹಲಿ

ಪೋಷಕರು ಮಕ್ಕಳೊಂದಿಗೆ ಮಾತೃಭಾಷೆಯಲ್ಲಿ ಸಂವಹನ ನಡೆಸಿ : ಅಮಿತ್ ಶಾ

ನವದೆಹಲಿ : ಎಲ್ಲ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದರು.

ಹಿಂದಿ ದಿವಸ್ ಅಂಗವಾಗಿ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದಿದರೂ ಕೂಡ ಪೋಷಕರು ತಮ್ಮ ಮಕ್ಕಳೊಂದಿಗೆ ಮಾತೃಭಾಷೆಯಲ್ಲಿಯೇ ಸಂವಹನ ನಡೆಸಬೇಕು. ಇಲ್ಲದಿದ್ದರೆ, ತಾಯಿ ಬೇರುಗಳಿಂದ ಮಕ್ಕಳು ದೂರವಾಗುತ್ತಾರೆ ಎಂದು ಹೇಳಿದರು.

‘ಪ್ರಾದೇಶಿಕ ಭಾಷೆಗಳೊಂದಿಗೆ ಹಿಂದಿಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಿಂದಿ ಎಲ್ಲಾ ಭಾರತೀಯ ಪ್ರಾದೇಶಿಕ ಭಾಷೆಗಳ ‘ಸಖಿ’ (ಸ್ನೇಹಿತ) ಆಗಿದೆ. ಭಾರತದ ಎಲ್ಲಾ ಪ್ರಾದೇಶಿಕ ಭಾಷೆಗಳು ಹಿಂದಿ ಭಾಷೆಗೆ ಪೂರಕ ಮತ್ತು ಸಂಪೂರ್ಣಗೊಳಿಸುತ್ತವೆ. ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಎಂದು ಶಾ ಹೇಳಿದರು.

2014 ರಿಂದ ಹೆಚ್ಚಿನ ಸಂಸದರು ಸಂಸತ್ತಿನಲ್ಲಿ ತಮ್ಮದೇ ಪ್ರಾದೇಶಿಕ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಮತ್ತು ಅದನ್ನು ಇಂಗ್ಲಿಷ್ ಮತ್ತು ಹಿಂದಿಗೆ ಮೌಖಿಕವಾಗಿ ಭಾಷಾಂತರಿಸಲಾಗುತ್ತಿದೆ. ಇದು ಜನರ ಪ್ರತಿನಿಧಿಗಳು ತಮ್ಮ ಪ್ರದೇಶದ ಸಮಸ್ಯೆಗಳನ್ನು ಉನ್ನತ ವೇದಿಕೆಯಲ್ಲಿ ಎತ್ತಿ ತೋರಿಸಲು ಸಹಾಯ ಮಾಡಿದೆ’ ಎಂದು ಹೇಳಿದರು.

Raksha Deshpande

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

1 min ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

18 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

37 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

39 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

54 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

56 mins ago