ನವದೆಹಲಿ : ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿಯನ್ನು ಒದಗಿಸುವ ನಿಟ್ಟಿನಲ್ಲಿ ಇರುವ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ)ಯನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 155.75 ಲಕ್ಷ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪರಿಷ್ಕೃತ ನಿರ್ಧಾರದ ಪ್ರಕಾರ ಪಿಎಂಎವೈ (ಆರ್) 2024 ಮಾ.31ಕ್ಕೆ ಮುಕ್ತಾಯವಾಗಿದೆ.