ದೆಹಲಿ

ಪ್ರಧಾನಿ ಮೋದಿ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ

 ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ಮಾಡಿ, ಕ್ವಾಡ್ ರಾಷ್ಟ್ರಗಳ ಮುಖಂಡರ ಶೃಂಗಸಭೆ ಮತ್ತು ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.

ಕೊರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಪ್ರಧಾನಿ ಮೋದಿಯವರ ಮೊದಲ ವಿಶೇಷ ಪ್ರಯಾಣ ಇದಾಗಲಿದೆ. ವಾಣಿಜ್ಯ, ಬಂಡವಾಳ ಹೂಡಿಕೆ ಮತ್ತು ರಕ್ಷಣೆ ಹಾಗೂ ಭದ್ರತೆ ವಿಚಾರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು.

ರಾಜಕೀಯ ನಾಯಕರಷ್ಟೇ ಅಲ್ಲದೆ ಅಮೆರಿಕದ ಅನೇಕ ಪ್ರಮುಖ ಕಂಪನಿಗಳ ಜೊತೆಯೂ ಪ್ರಧಾನಿ  ಮೋದಿ ಮಾತನಾಡಲಿದ್ದಾರೆ.  ಸೆ.26 ರಂದು ಪ್ರಧಾನಿ ಮೋದಿ ಭಾರತಕ್ಕೆ ವಾಪಾಸಾಗಲಿದ್ದಾರೆ. ಪ್ರಧಾನಿ ಮೋದಿಯವರು ಮೊದಲ ದಿನ ನ್ಯೂಯಾರ್ಕ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ.

ಗುರುವಾರ ಜೋ ಬಿಡೆನ್ ಅವರು ಆಯೋಜಿಸಿರುವ ಕೋವಿಡ್-19 ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆ.24 ರಂದು ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

4 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

6 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago