News Karnataka Kannada
Sunday, April 28 2024
ದೆಹಲಿ

ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೊರೋನಾ ಸೋಂಕು ದೃಢ

K'taka Cong gears up for Priyanka's B'luru convention
Photo Credit :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೂ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಖುದ್ದು ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೋವಿಡ್​ನ ಸೌಮ್ಯ ರೋಗಲಕ್ಷಣಗಳೊಂದಿಗೆ ಧನಾತ್ಮಕ ಪರೀಕ್ಷೆಗೊಳಪಟ್ಟಿದ್ದೇನೆ. ಕೋವಿಡ್​ನ ಎಲ್ಲ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಯಲ್ಲಿ ಸೆಲ್ಫ್ ಕ್ವಾರಂಟೈನ್​​ಗೊಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೊರೋನಾ ದೃಢಪಟ್ಟಿತ್ತು. ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ಹೇಳಿದ್ದರು. ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಪ್ರತ್ಯೇಕವಾಗಿ ಉಳಿದುಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು