News Karnataka Kannada
Sunday, April 28 2024
ದೆಹಲಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರಿಗೆ ಕೊರೊನಾ ಸೋಂಕು ದೃಢ

Jp Nadda
Photo Credit :

ನವದೆಹಲಿ, ಜ. 11 : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರೇ ಅಲೆಯ ಸಂದರ್ಭದಲ್ಲಿ ಹಲವಾರು ರಾಜಕೀಯ ನಾಯಕರಿಗೆ ಸೋಂಕು ಅಂಟಿಕೊಳ್ಳುತ್ತಿದೆ. ಕೊವಿಡ್-19 ಸೋಂಕಿತ ನಾಯಕರ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕೊವಿಡ್-19 ಸೋಂಕಿನ ಆರಂಭಿಕ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಅವರನ್ನು ಸೋಂಕಿನ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಅವರಲ್ಲಿ ಸೋಂಕು ತಗುಲಿರುವುದು ಖಾತ್ರಿಯಾಗಿದೆ.

“ನಾನು ಆರೋಗ್ಯವಾಗಿದ್ದೇನೆ ಮತ್ತು ವೈದ್ಯರ ಸಲಹೆಯ ಮೇರೆಗೆ ನಾನು ಕ್ವಾರೆಂಟೇನ್ ಆಗಿದ್ದೇನೆ,” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕೊರೊನಾವೈರಸ್ ಮೂರನೇ ಅಲೆಯಲ್ಲಿ ಜೆಪಿ ನಡ್ಡಾ ಅಲ್ಲದೇ ಹಲವಾರು ನಾಯಕರಿಗೆ ಸೋಂಕು ತಗುಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು