Categories: ದೆಹಲಿ

ಬಿಪಿನ್​​ ರಾವತ್​​ ಸೇರಿ 13 ಮಂದಿಯ ಪಾರ್ಥಿವ ಶರೀರ ದೆಹಲಿಯತ್ತ ರವಾನೆ

ಸೇನಾ ಹೆಲಿಕಾಪ್ಟರ್​​ ಅಪಘಾತದಲ್ಲಿ ಸಿಡಿಎಸ್​​ ಬಿಪಿನ್​​ ರಾವತ್​​ ಸೇರಿ 13 ಮಂದಿ ಸಾವಿಗೀಡಾಗಿದ್ದು, ಇವರ ಪಾರ್ಥಿವ ಶರೀರಗಳನ್ನ ಈಗಾಗಲೇ ತಮಿಳುನಾಡಿನ ಸುಲೂರು ಏರ್​​ಬೇಸ್​​​ನಿಂದ ದೆಹಲಿಗೆ ರವಾನೆ ಮಾಡಲಾಗಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ರಾತ್ರಿ ವೇಳೆ ಎಲ್ಲರ ಪಾರ್ಥಿವ ಶರೀರ ದೆಹಲಿ ಪಾಲಂ ಏರ್​​ಬೇಸ್​​ಗೆ ಬರಲಿವೆ. ವೀರ ಯೋಧರ ಪಾರ್ಥಿವ ಶರೀರ ದೆಹಲಿಯ ಪಾಲಂ ಏರ್​​ಬೇಸ್​​ಗೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್​​ ಸಿಂಗ್​​, ಎನ್​​ಎಸ್​​ಎ ಅಜಿತ್ ದೋವಲ್​​ ಸೇರಿದಂತೆ ಹಲವರು ಅಂತಿಮ ದರುಶನ ಪಡೆದುಕೊಳ್ಳಲಿದ್ದಾರೆ. ಬಳಿಕ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇದಾದ ಬಳಿಕ ಎಲ್ಲ ಯೋಧರ ಮೃತದೇಹ ಆಯಾ ರಾಜ್ಯಗಳಿಗೆ ರವಾನೆಯಾಗಲಿದ್ದು, ನಾಳೆ ಅಥವಾ ನಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ತಮಿಳುನಾಡಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್​​, ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್​ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದುಕೊಂಡರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

31 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

53 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

1 hour ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago