ದೆಹಲಿ

ಬೂಸ್ಟರ್ ಡೋಸ್ ನಿಂದ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆ ದೊರೆತಿಲ್ಲ; ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ ಭಾರ್ಗವ

ನವದೆಹಲಿ: ಕೊರೋನಾ ವಿರುದ್ಧ ಬೂಸ್ಟರ್ ಲಸಿಕೆ ಅಗತ್ಯ ಎನ್ನುವುದನ್ನು ಸಾಬೀತು ಮಾಡುವಂತಹ ವೈಜ್ಞಾನಿಕ ಪುರಾವೆಗಳು ಇದುವರೆಗೂ ದೊರೆತಿಲ್ಲ ಎಂದು ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ ಭಾರ್ಗವ ಹೇಳಿದ್ದಾರೆ.

ಕೊರೊನಾ ವಿರುದ್ಧ 2 ಡೋಸ್ ಲಸಿಕೆ ಪಡೆದುಕೊಂಡವರಿಗೆ ಮೂರನೆಯದಾಗಿ ಬೂಸ್ಟರ್ ಡೋಸ್ ನಿಂದ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆ ದೊರೆತಿಲ್ಲ. ಎರಡನೇ ಡೋಸ್ ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬೂಸ್ಟರ್ ಡೋಸ್ ಬಗ್ಗೆ ವೈಜ್ಞಾನಿಕ ಆಧಾರವಿಲ್ಲ. ದೇಶದಲ್ಲಿ ಎರಡನೇ ಡೋಸ್ ನೀಡಲು ಹೆಚ್ಚಿನ ಒತ್ತು ಕೊಡಲಾಗಿದೆ. ಇನ್ನು ಬೂಸ್ಟರ್ ಡೋಸ್ ವಿಚಾರದಲ್ಲಿ ಸರ್ಕಾರ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ತಜ್ಞರ ವರದಿ ಶಿಫಾರಸಿನ ನಂತರವೇ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಲಸಿಕೆ ಸಂಶೋಧನೆಯಿಂದ ಹಿಡಿದು ವಿತರಣೆಯವರೆಗೆ ಎಲ್ಲ ವಿಷಯದಲ್ಲಿಯೂ ಪ್ರಧಾನಿಯವರು ತಜ್ಞರ ಸಮಿತಿ ಸಲಹೆ, ಶಿಫಾರಸುಗಳಿಗೆ ಒತ್ತು ನೀಡಿದ್ದಾರೆ.

ಇನ್ನು ಬೂಸ್ಟರ್ ಡೋಸ್ ನೀಡಿಕೆ ಕುರಿತಂತೆ ಮುಂದೆ ನಡೆಯಲಿರುವ ತಜ್ಞರ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗ ದೇಶದಲ್ಲಿ ಅಗತ್ಯವಿರುವಷ್ಟು ಲಸಿಕೆ ಲಭ್ಯವಿದ್ದು, ಎಲ್ಲ ವಯಸ್ಕರಿಗೆ ಎರಡು ಡೋಸ್ ಲಸಿಕೆ ನೀಡುವ ಗುರಿಯನ್ನು ಪೂರ್ಣಗೊಳಿಸಲಾಗುವುದು. ನಂತರ ಬೂಸ್ಟರ್ ಡೋಸ್ ಬಗ್ಗೆ ಚಿಂತನೆ ನಡೆಸಬಹುದು ಎಂದು ಹೇಳಲಾಗಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago