Categories: ದೆಹಲಿ

ಭಾರತದಲ್ಲಿಂದು 1,088 ಹೊಸ ಕೇಸ್ ಪತ್ತೆ, 26 ಮಂದಿ ಸಾವು

ನವದೆಹಲಿ: ಭಾರತದಲ್ಲಿ ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 1,088 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ಭಾರತದಲ್ಲಿ ಒಂದೇ 4,06,251 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 79,45,25,202 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,38,016ಕ್ಕೆ ಏರಿಕೆಯಾಗಿದೆ.ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,736ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,870ಕ್ಕೆ ಇಳಿಕೆಯಾಗಿದೆಈ ನಡುವೆ ಕಳೆದ 24 ಗಂಟೆಗಳಲ್ಲಿ 1,081 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,05,410ಕ್ಕೆ ತಲುಪಿದೆ.

ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,90,68,616 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Swathi MG

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

19 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

52 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago