News Karnataka Kannada
Monday, April 29 2024
ದೆಹಲಿ

ಭಾರತದಲ್ಲಿಂದು 9,195 ಹೊಸ ಕೋವಿಡ್ ಕೇಸ್ ಪತ್ತೆ, 302 ಮಂದಿ ಸಾವು

Covid
Photo Credit :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ.ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,48,08,886ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,80,592ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿಡ್ ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಡಿಸೆಂಬರ್ 29) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 77,002ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 7,347 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,42,51,292ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,67,612 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 67,52,46,143 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು