Categories: ದೆಹಲಿ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆ!

ನವದಹಲಿ: ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,488 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆಯಾಗಿದೆ.ಈ ವರೆಗೂ 2,162 ಮಂದಿ ಗುಣಮುಖರಾಗಿದ್ದಾರೆಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ರಾಜಸ್ಥಾನ 792, ದೆಹಲಿ 549, ಕೇರಳ 486, ಕರ್ನಾಟಕ 479, ಪಶ್ಚಿಮ ಬಂಗಾಳ 294, ಉತ್ತರಪ್ರದೇಶ 275, ತೆಲಂಗಾಣ 260, ಗುಜರಾತ್ 236, ತಮಿಳುನಾಡು 185, ಒಡಿಶಾ 169, ಹರಿಯಾಣ 162, ಆಂಧ್ರಪ್ರದೇಶ 61, ಮೇಘಾಲಯ 31, ಬಿಹಾರ 27, ಪಂಜಾಬ್ 27, ಜಮ್ಮು ಮತ್ತು ಕಾಶ್ಮೀರ 23, ಗೋವಾ 21, ಮಧ್ಯಪ್ರದೇಶ 10, ಅಸ್ಸಾಂ 9, ಉತ್ತರಾಖಂಡ 8, ಚತ್ತೀಸ್ಗಢ 5, ಅಂಡಮಾನ್ ಮತ್ತು ನಿಕೋಬಾರ್ 3, ಚಂಡೀಗಢ3 ಹಾಗೂ ಲಡಾಖ್, ಪಾಂಡಿಚೆರಿಯಲ್ಲಿ ತಲಾ 2 ಪ್ರಕರಣಗಳು ವರದಿಯಾಗಿವೆ.ಅಂತೆಯೇ ಹಿಮಾಚಲಪ್ರದೇಶ, ಮಣಿಪುರದಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

 

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

49 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago