ನವದಹಲಿ: ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,753 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.