News Karnataka Kannada
Sunday, May 12 2024
ದೆಹಲಿ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 33,750 ಕೋವಿಡ್ ಪ್ರಕರಣ ಪತ್ತೆ

Omicrone
Photo Credit :

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 33,750 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ.ಒಂದೇ ದಿನದಲ್ಲಿ ದೇಶದಲ್ಲಿ 22,781 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಲ್ಲದೇ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 1,45,582ಕ್ಕೆ ಹೆಚ್ಚಳವಾಗಿದೆ.

ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜನವರಿ 03) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

24ಗಂಟೆಯಲ್ಲಿ ದೇಶಾದ್ಯಂತ ಕೋವಿಡ್ ಸೋಂಕಿನಿಂದ 10,846 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಈವರೆಗೆ ಒಟ್ಟು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,42,95,407ಕ್ಕೆ ಏರಿಕೆಯಾಗಿದೆ.

ಕೋವಿಡ್ ಸಂಖ್ಯೆ ಹೆಚ್ಚಳದ ನಡುವೆಯೇ ದೇಶದಲ್ಲಿ 24ಗಂಟೆಯಲ್ಲಿ 175 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 1,700ಕ್ಕೆ ಏರಿಕೆಯಾಗಿದ್ದು, 639 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು