Categories: ದೆಹಲಿ

ಭಾರತದಲ್ಲಿ ನಾಗರಿಕರಿಗೆ ಕೈಗೆಟಕುವ ಆರೋಗ್ಯ ಸೇವೆ ಸರ್ಕಾರದ ಸಂಕಲ್ಪ: ಪ್ರಧಾನಿ ಮೋದಿ

ನವದೆಹಲಿ:  ಭಾರತದಲ್ಲಿ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸುವತ್ತ ಗಮನಹರಿಸುವ ಮೂಲಕ  ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಿಶ್ವ ಆರೋಗ್ಯ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಈ ವರ್ಷದ ವಿಶ್ವ ಆರೋಗ್ಯ ದಿನದಂದು, ಮಾನವರು ಮತ್ತು ಭೂಪ್ರತಿಯೊಬ್ಬರೂ ಉತ್ತಮ ಆರೋಗ್ಯ ಲಭಿಸಲಿ ಆರೋಗ್ಯ ಕ್ಷೇತ್ರದೊಂದಿಗೆ ಗುರುತಿಸಿಕೊಂಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಭೂಮಂಡಲ ರಕ್ಷಿಸಿದೆ ಎಂದು ಮೋದಿ ಹೇಳಿದ್ದಾರೆ.ಮಂಡಲ ಆರೋಗ್ಯವಾಗಿಡಲು ಮತ್ತು ಯೋಗಕ್ಷೇಮದ ಮೇಲೆ ಕೇಂದ್ರೀಕರಿಸಿದ ಸಮಾಜಗಳನ್ನು ರಚಿಸಲು ಚಳುವಳಿಯನ್ನು ಉತ್ತೇಜಿಸಲು ಅಗತ್ಯವಾದ ತುರ್ತು ಕ್ರಮಗಳ ಮೇಲೆ ಜಾಗತಿಕ ಗಮನವನ್ನು ಕೇಂದ್ರೀಕರಿಸಿದೆ ಎಂದರು.

ನಮ್ಮ ರಾಷ್ಟ್ರವು ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಆಯುಷ್ಮಾನ್ ಭಾರತ್ ನೆಲೆಯಾಗಿದೆ ಎಂಬುದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುತ್ತದೆ ಎಂದು ಅವರು ಹೇಳಿದ್ದಾರೆ.

ಜನೌಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ತುಂಬಾ ಸಂತೋಷವಾಗುತ್ತದೆ. ಕೈಗೆಟುಕುವ ಆರೋಗ್ಯ ಸೇವೆ ಬಡ ಮತ್ತು ಮಧ್ಯಮ ವರ್ಗದವರಿಗೆ ದೊರೆತರೆ ಗಮನಾರ್ಹ ಉಳಿತಾಯ ಖಚಿತಪಡಿಸಿದೆ ಎಂದು ಮೋದಿ ಪ್ರತಿಪಾದಿಸಿದರು.
ಅದೇ ಸಮಯದಲ್ಲಿ, ಒಟ್ಟಾರೆ ಸ್ವಾಸ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು ಆಯುಷ್ ಷೇತ್ರವನ್ನು ಬಲಪಡಿಸುತ್ತಿದೆ ಎಂದು ಅವರು ಹೇಳಿದರು.

Swathi MG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago