Categories: ದೆಹಲಿ

ಭಾರತದಲ್ಲಿ 2.51 ಲಕ್ಷ ಹೊಸ ಕೇಸ್ ಪತ್ತೆ, 627 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಶುಕ್ರವಾರ 2,51,209 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 627 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,05,611ಕ್ಕೆ ತಲುಪಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 40622709ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 492327ಕ್ಕೆ ಏರಿಕೆಯಾಗಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 3,47,443 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,80,24,771ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 14,62,261 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,21,66,248 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,64,44,73,216 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Swathi MG

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

14 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

30 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

52 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago