ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,145 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 289 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 18) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 84,565ಕ್ಕೆ ತಲುಪಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,33,194ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,77,158ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 8,706 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,71,471 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 12,59,932 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 66,15,07,694 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
.