News Karnataka Kannada
Monday, April 29 2024
ದೆಹಲಿ

ಮತ್ತೊಮ್ಮೆ ತನ್ನ ರೆಪೋ ದರವನ್ನು ಹೆಚ್ಚಳ ಮಾಡಿದ ಆರ್‌ಬಿಐ!

Rbi
Photo Credit :

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತೊಮ್ಮೆ ತನ್ನ ರೆಪೋ ದರವನ್ನು ಹೆಚ್ಚಳ ಮಾಡಿದೆ. ಇದರಿಂದಾಗಿ ಗ್ರಾಹಕರ ಸಾಲದ ಮೇಲಿನ ಬಡ್ಡಿಯೂ ಹೆಚ್ಚಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಗೃಹ ಸಾಲ, ವೈಯಕ್ತಿಕ ಸಾಲ, ಕಾರ್‌ ಲೋನ್‌ ಹೀಗೆ ಎಲ್ಲದರ ಮೇಲೆ ಪರಿಣಾಮ ಬೀರಲಿದೆ.

ಇಂದು (ಬುಧವಾರ) ಆರ್‌ಬಿಐ ಗೌವರ್ನರ್‌ ಶಕ್ತಿಕಾಂತ್ ದಾಸ್ 50 ಬೇಸಿಸ್ ಪಾಯಿಂಟ್‌ಗಳನ್ನು ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ರೆಪೊ ದರ ಶೇ.4.40 ರಿಂದ ಶೇ.4.9೦ಕ್ಕೆ ಏರಿಕೆಯಾಗಿದೆ. ಹೆಚ್ಚಿಸಿದ ಬಡ್ಡಿ ದರಗಳು ತಕ್ಷಣವೇ ಜಾರಿಗೆ ಬರಲಿದ್ದು, ಆರ್‌ಬಿಐ ಗವರ್ನರ್ ನೇತೃತ್ವದ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಆರು ಸದಸ್ಯರು ದರ ಏರಿಕೆಗೆ ಸರ್ವಾನುಮತದಿಂದ ಮತ ಹಾಕಿದ್ದಾರೆ.

ಒಂದು ತಿಂಗಳ ಅವಧಿಯಲ್ಲಿ ಆರ್‌ಬಿಐ ತನ್ನ ರೆಪೋ ದರವನ್ನು ಎರಡು ಬಾರಿ ಹೆಚ್ಚಳ ಮಾಡಿದೆ. ಮತ್ತೊಂದೆಡೆ, ಆರ್‌ಬಿಐನ ಈ ನಿರ್ಧಾರದಿಂದಾಗಿ ಬ್ಯಾಂಕ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ಸಹ ಬಡ್ಡಿದರಗಳನ್ನು ಹೆಚ್ಚಿಸಲಿವೆ.

ಇಎಂಐ ವಿಶೇಷವಾಗಿ ಗೃಹ ಬಳಕೆದಾರರಿಗೆ ಹೊರೆಯಾಗಲಿದೆ. ಈಗಾಗಲೇ ಯಾವುದಾದರೂ ಬ್ಯಾಂಕ್ ನಲ್ಲಿ ಸಾಲ ಹೊಂದಿದ್ದರೆ ಅಥವಾ ಸಾಲವನ್ನು ತೆಗೆದುಕೊಳ್ಳುವ ಯೋಚನೆ ಇದ್ದರೆ ಮುಂದಿನ ದಿನಗಳಲ್ಲಿ ಆ ಸಾಲದ ಬಡ್ಡಿದರ ಹೆಚ್ಚಳವಾಗುತ್ತದೆ. ಪರಿಣಾಮವಾಗಿ ಸಾಲದ ಇಎಂಐ ಮೊದಲಿಗಿಂತ ಹೆಚ್ಚಾಗಿರುತ್ತದೆ. ಇದು ಹೊಸ ಮತ್ತು ಹಳೆಯ ಎರಡೂ ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು