News Karnataka Kannada
Friday, May 03 2024
ದೆಹಲಿ

ಮದುವೆ ಸಮಾರಂಭದಲ್ಲಿ ದುರಂತ : ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

Narendra Modi
Photo Credit :

ನವದೆಹಲಿ: ಉತ್ತರ ಪ್ರದೇಶ ವಿವಾಹ ಮಹೋತ್ಸವದ ವೇಳೆ ಬಾವಿಗೆ ಬಿದ್ದು ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ 13 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದ ಕುಶಿನಗರದಲ್ಲಿ ಸಂಭವಿಸಿದ ಘಟನೆ ಹೃದಯ ವಿದ್ರಾವಕವಾಗಿದೆ. ಘಟನೆಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಅಲ್ಲದೆ, ದುರ್ಘಟನೆಯಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು