ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಡಾ. ಮನಮೋಹನ್ ಸಿಂಗ್ ಅವರ ಉತ್ತಮ ಆರೋಗ್ಯ ಹಾಗೂ ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ, ದೆಹಲಿಯ ಏಮ್ಸ್ ಆಸ್ಪತ್ರೆಗೆ ತೆರಳಿ ಮನಮನೋಹನ್ ಸಿಂಗ್ ಅವರನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.