ನವದೆಹಲಿ: ಶೇಕಡ 27 ರಷ್ಟು ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಶೇಕಡ 27 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದ್ದು, ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು.
ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ಪೀಠದಿಂದ ತಡೆಯಾಜ್ಞೆ ನೀಡಲಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಶೇಕಡ 27 ರಷ್ಟು ಮೀಸಲಾತಿ ಕಲ್ಪಿಸಿ ಮಹಾರಾಷ್ಟ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ತಡೆ ನೀಡಲಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.