Categories: ದೆಹಲಿ

ಮಾ.26ಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳ ಸಭೆ

ನವದೆಹಲಿ : ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ, ಸಾಂಸ್ಥಿಕ ಚುನಾವಣೆ ಮತ್ತು ಸದ್ಯದ ರಾಜಕೀಯ ಪರಿಸ್ಥಿತಿ ಕುರಿತಂತೆ ಚರ್ಚಿಸಲು ಮಾರ್ಚ್ 26ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯನ್ನು ಕರೆದಿದ್ದಾರೆ.

ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿ ಸಚಿವರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಸೋನಿಯಾ ಗಾಂಧಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಪಕ್ಷದ ಸದಸ್ಯತ್ವ ನೋಂದಣಿ, ಮುಂದಿನ ಹೋರಾಟದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ.

ಇತ್ತೀಚಿಗೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲು ಹಾಗೂ ಸೋನಿಯಾ ಗಾಂಧಿ ಕೆಲ ಜಿ-23 ಮುಖಂಡರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಸಭೆ ನಡೆಸಲಾಗುತ್ತಿದೆ. ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮನೀಷ್ ತಿವಾರಿ ಮತ್ತು ವಿವೇಕ್ ಟಾಂಕಾ ಸೇರಿದಂತೆ ಕೆಲವು ಅತೃಪ್ತ ಗುಂಪಿನ ಸದಸ್ಯರೊಂದಿಗೆ ಸೋನಿಯಾ ಗಾಂಧಿ ಸಮಾಲೋಚನೆ ನಡೆಸಿದ್ದರು.

Gayathri SG

Recent Posts

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

2 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

17 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

28 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

43 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 hours ago