Categories: ದೆಹಲಿ

ಮೋದಿಯವರಿಂದ ಹೊಸ ಚಾನೆಲ್ ಸಂಸದ್ ಟಿವಿ ಉದ್ಘಾಟನೆ

 ದೆಹಲಿ :  ಪ್ರಧಾನಿ ಮೋದಿಯವರು ಇಂದು ಹೊಸ ಚಾನೆಲ್ ಸಂಸದ್ ಟಿವಿಯನ್ನು ಉದ್ಘಾಟಿಸಲಿದ್ದಾರೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸಿ ಸಂಸದ್ ಟಿವಿ ಹೆಸರಿನ ಚಾನೆಲ್ ಆರಂಭಿಸಲಾಗುತ್ತಿದೆ. ಉಭಯ ಸದನಗಳ ಕಾರ್ಯಾಚರಣೆ ಕುರಿತು ಸಂಸದ್ ಟಿವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದೆ.

ಕಾಂಗ್ರೆಸ್ ಮುಖಂಡ ಕರಣ್ ಸಿಂಗ್, ಅರ್ಥಶಾಸ್ತ್ರಜ್ಞ ವಿವೇಕ್ ದೆಬರಾಯ್, ನೀತಿ ಆಯೋಗ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾಬ್ ಕಾಂತ್ ಹಾಗೂ ಅಡ್ವೋಕೇಟ್ ಹೇಮಂತ್ ಬಾತ್ರಾ ಅವರು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಮತ್ತು ಜವಳಿ ಸಚಿವಾಲಯದ ಕಾರ್ಯದರ್ಶಿ ರವಿ ಕಪೂರ್ ಅವರು ಸಂಸದ್ ಟಿವಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Sneha Gowda

Recent Posts

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

3 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

9 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

21 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

59 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

1 hour ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago