News Karnataka Kannada
Monday, April 29 2024
ದೆಹಲಿ

ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ: ಐವರು ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit :

ನವದೆಹಲಿ: ಆಗ್ರಾದಿಂದ ನೊಯ್ಡಾಕ್ಕೆ ಹೋಗುವ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬೆಳ್ಳಂ ಬೆಳಿಗ್ಗೆ 5 ಗಂಟೆಗೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಬೊಲೆರೊ ಕಾರಿನಲ್ಲಿ 7 ಮಂದಿ ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಬೊಲೆರೋ ಕಾರು ಡಂಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಸಲಾಗಿದ್ದು, ಅದರಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಉಳಿದಂತೆ ಗಂಭೀರವಾಗಿ ಗಾಯಗೊಂಡಿರುವ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು