Categories: ದೆಹಲಿ

ರಷ್ಯಾ-ಉಕ್ರೇನ್ ಬಿಕ್ಕಟ್ಟು:ಯುರೋಪ್ ಒಕ್ಕೂಟ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ: ಯುರೋಪ್ ಒಕ್ಕೂಟದ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಉಕ್ರೇನ್‌ನ ಮಾನವೀಯ ಬಿಕ್ಕಟ್ಟಿಗೆ ಸಂಬಂಧಿಸಿ ಬೇಸರ ವ್ಯಕ್ತಪಡಿಸಿದ್ದಾರೆ.

ಎರಡೂ ದೇಶಗಳ ನಡುವಣ ಮಾತುಕತೆಯನ್ನು ಸ್ವಾಗತಿಸಿದ ಮೋದಿ ಎಲ್ಲ ಜನರಿಗೆ ತಡೆರಹಿತ ಮತ್ತು ಸುಗಮ ಸಂಚಾರವನ್ನು ಖಾತರಿಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಯುದ್ಧವನ್ನು ನಿಲ್ಲಿಸುವುದು ಮತ್ತು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತಾಗಿ ಭಾರತ ವ್ಯಕ್ತಪಡಿಸಿದ್ದ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ಔಷಧಗಳು ಸೇರಿದಂತೆ ತುರ್ತು ಅಗತ್ಯವಿರುವ ಪರಿಹಾರ ಸಾಮಗ್ರಿಗಳನ್ನು ಉಕ್ರೇನ್‌ಗೆ ಕಳುಹಿಸಲು ಭಾರತವು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಅವರು ವಿವರಿಸಿದ್ದಾರೆ.

ಈ ಮಧ್ಯೆ, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ವಾಯುಪಡೆಯ ಸಿ-17 ವಿಮಾನವನ್ನು ಬುಧವಾರ ಕಳುಹಿಸಿಕೊಡಲಾಗುವುದು ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ತಿಳಿಸಿದ್ದಾರೆ.

Swathi MG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

4 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

16 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

26 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

37 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

55 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago