News Karnataka Kannada
Sunday, May 05 2024
ದೆಹಲಿ

ರಾಜ್ಯಸಭೆ ಚುನಾವಣೆ: ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್’ರನ್ನು ಕಣಕ್ಕಿಳಿಸಿದ ಬಿಜೆಪಿ

Lehar Singh
Photo Credit :

ನವದೆಹಲಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸೋಮವಾರ ಮತ್ತೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕರ್ನಾಟಕದಿಂದ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

ಬಿಜೆಪಿಯ ಒಬಿಸಿ ವಿಭಾಗದ ಮುಖ್ಯಸ್ಥ ಕೆ ಲಕ್ಷ್ಮಣ್ ಅವರನ್ನು ಉತ್ತರ ಪ್ರದೇಶದಿಂದ, ಸುಮಿತ್ರಾ ವಾಲ್ಮೀಕಿ ಅವರನ್ನು ಮಧ್ಯಪ್ರದೇಶದಿಂದ, ಲೆಹರ್ ಸಿಂಗ್ ಸಿರ್ಹೋಯಾ ಅವರನ್ನು ಕರ್ನಾಟಕದಿಂದ ಮತ್ತು ಮಿಥಿಲೇಶ್ ಕುಮಾರ್ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್​ ಅಲಿಖಾನ್​ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್​ ಕೂಡ ಮಹತ್ತರ ನಿರ್ಧಾರ ಕೈಗೊಂಡಿದ್ದು, ಲೇಹರ್ ಸಿಂಗ್ ಅವರಿಗೆ ಟಿಕೆಟ್ ನೀಡಿ ಅಖಾಡಕ್ಕಿಳಿಸಿದೆ. ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು