Categories: ದೆಹಲಿ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ

ನವದೆಹಲಿ: 18.80 ಕೋಟಿಗೂ ಹೆಚ್ಚು ಡೋಸ್ ಬಾಕಿ ಮತ್ತು ಬಳಕೆಯಾಗದ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 140 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

“ಭಾರತ ಸರ್ಕಾರ (ಉಚಿತ) ಮತ್ತು ನೇರ ರಾಜ್ಯಗಳ ಖರೀದಿ ವರ್ಗದ ಮೂಲಕ ಇದುವರೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಳಿಗೆ 140 ಕೋಟಿಗೂ ಹೆಚ್ಚು (1,40,04,00,230) ಡೋಸ್ ಲಸಿಕೆ ಒದಗಿಸಲಾಗಿದೆ.

18.80 ಕೋಟಿಗಳಿಗಿಂತ ಹೆಚ್ಚು (18,80) ,33,706) ಬಾಕಿ ಮತ್ತು ಬಳಕೆಯಾಗದ ಕೋವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಜನವರಿ 16 ರಂದು ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದು, ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ

Swathi MG

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

26 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

41 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago