News Karnataka Kannada
Friday, May 03 2024
ದೆಹಲಿ

ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೊರೋನಾ: ಯಲ್ಲೋ ಅಲರ್ಟ್​, ಶಾಲಾ-ಕಾಲೇಜು ಬಂದ್

Delhi
Photo Credit :

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಶ್ರೇಣಿಕೃತ ಪ್ರತಿಕ್ರಿಯೆ ಕಾರ್ಯಾಚರಣೆ ಯೋಜನೆ(ಜಿಆರ್ ಎಪಿ) ಅಡಿಯಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಿಎಂ ಕೇಜ್ರಿವಾಲ್, ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.5ಕ್ಕಿಂತ ಹೆಚ್ಚಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಈ ವೇಳೆ ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್ ತೆರೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ದೆಹಲಿಯಲ್ಲಿ ಯಾವುದಕ್ಕೆ ನಿರ್ಬಂಧ, ಯಾವುದಕ್ಕೆ ಅನುಮತಿ?

ಸಿನಿಮಾ ಹಾಲ್, ಬ್ಯಾಂಕ್ವೆಟ್ ಹಾಲ್ ಗಳು, ಸ್ಪಾ, ಜಿಮ್ಸ್, ಔಟ್ ಡೋರ್ ಯೋಗ ಚಟುವಟಿಕೆ, ಈಜುಕೊಳ, ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳು ಸಂಪೂರ್ಣ ಬಂದ್.

ಖಾಸಗಿ ಕಚೇರಿಗಳು ಶೇ.50ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅವಕಾಶ, ಶಾಪಿಂಗ್ ಕಾಂಪ್ಲೆಕ್ಸ್, ಅಂಗಡಿಗಳನ್ನು ದಿನ ಬಿಟ್ಟು, ದಿನ ತೆರೆಯಲು ಅವಕಾಶ. ಬೆಳಗ್ಗೆ 10ರಿಂದ ರಾತ್ರಿ 8ಗಂಟೆವರೆಗೆ ವ್ಯವಹಾರ ನಡೆಸಲು ಮಾತ್ರ ಅನುಮತಿ.
ವಾರದ ಸಂತೆಯಲ್ಲಿ ಶೇ.50ರಷ್ಟು ಮಾರಾಟಗಾರರಿಗೆ ಅವಕಾಶ.

ರೆಸ್ಟೋರೆಂಟ್ ಗಳು ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆಯೊಂದಿಗೆ ತೆರೆಯಲು ಅನುಮತಿ
ಬಾರ್ ಗಳು ಕೂಡಾ ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ತೆರೆಯಲು ಅವಕಾಶ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು