ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಟ್ಟ ಹೆಚ್ಚಾಗಿದ್ದು, ಗಾಳಿ ಗುಣಮಟ್ಟ ಸೂಚ್ಯಂಕ 300 ದಾಖಲಾಗಿದೆ.
ಈ ಬಗ್ಗೆ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ವ್ಯವಸ್ಥೆಯು ವರದಿ ಮಾಡಿದೆ. ದೆಹಲಿಯ ವಾಯು ಗುಣಮಟ್ಟ ಕುಸಿಯುತ್ತಿದ್ದು, ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಗಾಳಿ ಗುಣಮಟ್ಟ ಸೂಚ್ಯಂಕ 305 ದಾಖಲಾಗಿದೆ.
ಮುಂದಿನ ದಿನಗಳಲ್ಲಿ ಗಾಳಿ ಗುಣಮಟ್ಟ ಮತ್ತಷ್ಟು ಕಳಪೆ ಮಟ್ಟವನ್ನು ತಲುಪುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಅಕ್ಟೋಬರ್ 17 ರಂದು ದಾಖಲಾದ ಕಳಪೆ ಗಾಳಿ ಗುಣಮಟ್ಟ ದಾಖಲಾಗಿಲ್ಲ.