Categories: ದೆಹಲಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಹೆಚ್ಚಿದ ಕೊರೊನಾ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 2ಕ್ಕಿಂತ ಹೆಚ್ಚಾಗಿದ್ದು, ಗುರುವಾರ ಒಂದೇ ದಿನ 325 ಕೋವಿಡ್ ಪ್ರಕರಣಗಳು ಪತ್ತೆಯಾಗಿ, ಕಳೆದೊಂದು ವಾರದಲ್ಲಿ ಮನೆಯಲ್ಲಿ ಕ್ವಾರಂಟೈನ್ ಆಗಿರುವವರ ಸಂಖ್ಯೆ ಶೇ 48ರಷ್ಟಿದೆ ಎಂದು ಸರ್ಕಾರದ ದತ್ತಾಂಶಗಳು ತಿಳಿಸಿವೆ.

ಪಾಸಿಟಿವಿಟಿ ದರವು ಶೇ 2.39ರಷ್ಟಾಗಿತ್ತು. ಇನ್ನು ಸೋಂಕಿಗೆ ತುತ್ತಾಗಿ 574 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೊರೊನಾ ಲಸಿಕೆಯ ಮುನ್ನೆಚ್ಚರಿಕಾ ಡೋಸ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರವೇ ಉಚಿತವಾಗಿ ನೀಡಲಾಗುತ್ತದೆ ದೆಹಲಿ ಸರ್ಕಾರ ಘೋಷಣೆ ಮಾಡಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹರಿಗೆ ಖಾಸಗಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕೋವಿಡ್ ಡೋಸ್ ನೀಡಿಕೆಯನ್ನು ಭಾನುವಾರದಿಂದ ಆರಂಭಿಸಲಾಗಿದೆ. ಲಸಿಕೆಯ 2ನೇ ಡೋಸ್ ಪಡೆದು 9 ತಿಂಗಳು ಪೂರೈಸಿದ ಎಲ್ಲರೂ ಸಹ ಮುನ್ನೆಚ್ಚರಿಕಾ ಡೋಸ್‌ಗೆ ಅರ್ಹವಾಗಿರಲಿದ್ದಾರೆ.

ಅಂಬೇಡ್ಕರ್ ಜಯಂತಿ, ಗುಡ್ ಫ್ರೈಡೆ ಹಾಗೂ ವಾರಾಂತ್ಯ ಸೇರಿದಂತೆ ಒಟ್ಟಾರೆ 4 ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಲಾಗಿದೆ. ಈ ನಡುವೆ ಕಳೆದ ವಾರ ವಸಂತ ಕುಂಜ್ ಎಂಬಲ್ಲಿರುವ ಖಾಸಗಿ ಶಾಲೆಯ ಐವರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಸೋಂಕು ದೃಢಪಟ್ಟಿದ್ದು, ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ಪತ್ತೆಯಾದ ತರಗತಿ ಅಥವಾ ಶಾಲೆಯ ಆ ಭಾಗವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

Swathi MG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

11 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

52 mins ago