Categories: ದೆಹಲಿ

ರೈಲ್ವೆ ಪ್ರಯಾಣಿಕರು ಮೊಬೈಲ್‌ನಲ್ಲಿ ರಾತ್ರಿ ಜೋರಾಗಿ ಮಾತಾಡುವಂತಿಲ್ಲ: ಭಾರತೀಯ ರೈಲ್ವೆ

ನವದೆಹಲಿ: ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್‌ ಸ್ಪೀಕರ್‌’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ.

ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ.

ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣೆ ಸಿಬ್ಬಂದಿ ಈ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ರೈಲ್ವೆ ತಿಳಿಸಿದೆ.

ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರು ಮೊಬೈಲ್‌ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಷರತ್ತುಗಳ ನಡುವೆಯೂ 60 ವರ್ಷ ಮೇಲಿನ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಒಂಟಿ ಮಹಿಳಾ ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿ ಅಗತ್ಯ ನೆರವು ನೀಡುತ್ತಾರೆ.

ಹೊಸ ಮಾರ್ಗಸೂಚಿಗಳ ಕುರಿತು ರೈಲ್ವೆ ವಲಯ ಮಟ್ಟದಲ್ಲಿ, ಪ್ರಯಾಣಿಕರಿಗೆ ಜಾಗೃತಿ ಮೂಡಿಸಬೇಕು. ರೈಲಿನಲ್ಲಿ ಏರಿದ ಧ್ವನಿಯಲ್ಲಿ ಮೊಬೈಲ್‌ನಲ್ಲಿ ಮಾತನಾಡದಂತೆ ಹಾಗೂ ಇಯರ್‌ ಫೋನ್‌ ಇಲ್ಲದೆ ಸಂಗೀತ ಕೇಳದಂತೆ ಪ್ರಯಾಣಿಕರರಿಗೆ ಸಲಹೆಗಳನ್ನು
ಟಿಕೆಟ್‌ ಪರಿಶೀಲಕರು ಮತ್ತು ಇತರ ರೈಲ್ವೆ ಸಿಬ್ಬಂದಿ ನೀಡಬೇಕು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

12 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

30 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

44 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

53 mins ago