ದೆಹಲಿ

ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನಡಯುಸಿರೆಳೆದುದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ.

ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago