ನವದೆಹಲಿ: ಪಂಜಾಬ್ ನ ಲೂಧಿಯಾನಾ ಜಿಲ್ಲಾ ಕೋರ್ಟ್ ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಲೂಧಿಯಾನಾ ಜಿಲ್ಲಾ ಕೋರ್ಟ್ ನ ಮೂರನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ.
ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋರ್ಟ್ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ರಕ್ಷಣಾ ಪಡೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದೆ.