News Karnataka Kannada
Tuesday, May 07 2024
ದೆಹಲಿ

ವಯಸ್ಕರಲ್ಲಿ ಶೇಕಡಾ 75 ರಷ್ಟು ಜನರಿಗೆ ಲಸಿಕೆ ಪೂರ್ಣ; ನಾಗರಿಕರನ್ನು ಅಭಿನಂದಿಸಿದ ಮೋದಿ

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದ, ಈ ಹಿನ್ನೆಲೆಯಲ್ಲಿ ಜ.3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿಗಳಿಂದ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
Photo Credit : IANS

ಹೊಸದಿಲ್ಲಿ : ಭಾರತದ ವಯಸ್ಕ ಜನಸಂಖ್ಯೆಯ ಶೇಕಡಾ 75 ರಷ್ಟು ಜನರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ನಾಗರಿಕರನ್ನು ಅಭಿನಂದಿಸಿದ್ದಾರೆ.

‘ಎಲ್ಲಾ ವಯಸ್ಕರಲ್ಲಿ ಶೇಕಡಾ 75 ರಷ್ಟು ಜನರು ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ. ಈ ಮಹತ್ವದ ಸಾಧನೆಗಾಗಿ ನಾಗರಿಕರಿಗೆ ಅಭಿನಂದನೆಗಳು. ನಮ್ಮ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸುತ್ತಿರುವ ಎಲ್ಲರ ಬಗ್ಗೆ ಹೆಮ್ಮೆಯಿದೆ’ ಎಂದು ಪ್ರಧಾನಿ ಮೋದಿ ಭಾನುವಾರ ಟ್ವೀಟ್ ಮಾಡಿದ್ದಾರೆ.

ದೇಶದ ವಯಸ್ಕ ಜನಸಂಖ್ಯೆಯ ಶೇಕಡಾ 75 ಕ್ಕಿಂತ ಹೆಚ್ಚು ಜನರು ಈಗ ಕೋವಿಡ್ ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದ ನಂತರ ಪ್ರಧಾನ ಮಂತ್ರಿಯ ಅಭಿನಂದನಾ ಟ್ವೀಟ್ ಬಂದಿದೆ.

‘ಸಬ್ಕಾ ಸಾಥ್, ಸಬ್ಕಾ ಪ್ರಯಾಸ್’ ಎಂಬ ಮಂತ್ರದೊಂದಿಗೆ, ಭಾರತವು ತನ್ನ ವಯಸ್ಕ ಜನಸಂಖ್ಯೆಯ ಶೇಕಡಾ 75 ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ಹಾಕಿದೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ನಾವು ಬಲಶಾಲಿಯಾಗುತ್ತಿದ್ದೇವೆ. ನಾವು ಎಲ್ಲಾ ನಿಯಮಗಳನ್ನು ಅನುಸರಿಸಬೇಕು ಮತ್ತು ನಿರ್ವಹಿಸಬೇಕು. ಆದಷ್ಟು ಬೇಗ ಲಸಿಕೆ ಹಾಕಿಕೊಳ್ಳಿ,’ ಎಂದು ಮಾಂಡವಿಯ ಟ್ವೀಟ್ ಮಾಡಿದ್ದಾರೆ.

ಭಾರತ ಸರ್ಕಾರವು ಇದುವರೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 164.36 ಕೋಟಿಗೂ ಹೆಚ್ಚು (1,64,36,66,725) ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

12.43 ಕೋಟಿಗಿಂತ ಹೆಚ್ಚು (12,43,49,361) ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ ಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತದ ಪ್ರದೇಶಗಳಲ್ಲಿ ಲಭ್ಯವಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು