News Karnataka Kannada
Thursday, May 02 2024
ದೆಹಲಿ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ರೂ.250 ಏರಿಕೆ!

Gas
Photo Credit :

ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ.ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂ. ಪಾವತಿ ಮಾಡಬೇಕಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾದ ಹೆಚ್ಚಳ ಕಂಡು ಬರುತ್ತಿರುವ ಕಾರಣ ಅನಿಲ ಬೆಲೆ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು