ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ರಾಮಗಢ ಪ್ರದೇಶದಲ್ಲಿ ವಾಹನವೊಂದು ಪಲ್ಟಿಯಾದ ಪರಿಣಾಮ ಓರ್ವ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು 38 ವರ್ಷದ ವೀರೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಜೈಸಲ್ಮೇರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.ರಾಮಗಢದ ಎಸ್ಎಚ್ಒ ಚುನ್ನಿಲಾಲ್ ತಿಳಿಸಿದ್ದಾರೆ.