News Karnataka Kannada
Friday, May 03 2024
ದೆಹಲಿ

ವಿದೇಶದಿಂದ ಬಂದ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು

Airport
Photo Credit :

ನವದೆಹಲಿ: ಕಳೆದ ಮೂರು ದಿನಗಳಿಂದ ಅಂತರರಾಷ್ಟ್ರೀಯ ವಿಮಾನಗಳಲ್ಲಿ ಇಲ್ಲಿಗೆ ಆಗಮಿಸಿರುವ 12 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಈ ಪ್ರಯಾಣಿಕರು ಇಂಗ್ಲೆಂಡ್‌, ಫ್ರಾನ್ಸ್‌ ಹಾಗೂ ಬೆಲ್ಜಿಯಂನಿಂದ ಬಂದಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ಹೇಳಿದ್ದಾರೆ

ಕೋವಿಡ್‌ ದೃಢಪಟ್ಟಿರುವ ಎಲ್ಲಾ ಪ್ರಯಾಣಿಕರನ್ನು ದೆಹಲಿಯ ಲೋಕನಾಯಕ ಜಯ‍ಪ್ರಕಾಶ್‌ ನಾರಾಯಣ(ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಿದೆ.ಓಮೈಕ್ರಾನ್‌ ರೂಪಾಂತರದ ಕುರಿತ ಹೆಚ್ಚಿನ ಪರೀಕ್ಷೆಗಾಗಿ ಈ ಎಲ್ಲಾ 12 ಪ್ರಯಾಣಿಕರ ಮಾದರಿಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್‌ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು