ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಈಗ ಮುಂದುವರೆದು ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.
ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸಿದಂತ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ ಸಹಿತ, 7 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ.
ಇನ್ನೂ 7 ದಿನಗಳು ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತ್ರ, ಮತ್ತೆ ಆರ್ ಟಿ ಪಿಸಿಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಆ ವರದಿಯನ್ನು ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡುವಂತೆ ತಿಳಿಸಿದೆ.
ಒಂದು ವೇಳೆ ವಿದೇಶಿ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೇ, ಅವರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.