ದೆಹಲಿ

ವಿವಾಹಿತ ಮಹಿಳೆ ಮೇಲೆ ಸಾಮೂಕಿಕ ಅತ್ಯಾಚಾರ: 9 ಮಂದಿ ಬಂಧನ

ನವದೆಹಲಿ  : ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್​ ವಿಹಾರದಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಕಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಈವರೆಗೂ ಬಂಧಿಸಲಾಗಿದ್ದು, ಅದರಲ್ಲಿ 7 ಮಂದಿ ಮಹಿಳೆಯರಾಗಿದ್ದಾರೆ.

ಬಂಧಿತ 9 ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆಂದು ಪೂರ್ವ ದೆಹಲಿಯ ಶಹದಾರಾ ಠಾಣಾ ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದಂದೇ ವಿವೇಕ್​ ವಿಹಾರ ಏರಿಯಾದಲ್ಲಿ 20 ವರ್ಷ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಮತ್ತು ಆಕೆಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಸಂತ್ರಸ್ತೆಯನ್ನು ಚಪ್ಪಲಿ ಹಾಕಿ ಬೀದಿಯಲ್ಲಿ ಅದೇ ದಿನ ಮೆರವಣಿಗೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಘಟನೆ ನಡೆದ ಬೆನ್ನಲ್ಲೇ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಲ್​, ಘಟನೆಯ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರೋ ಅದರ ಸಮಗ್ರ ವರದಿಯನ್ನು 72 ಗಂಟೆಯೊಳಗೆ ಸಲ್ಲಿಸುವಂತೆ ದೆಹಲಿ ಪೊಲೀಸರನ್ನು ಕೇಳಿದ್ದರು. ಇದಾದ ಒಂದು ದಿನದ ಬೆನ್ನಲ್ಲೇ ದೆಹಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ.

ಅಲ್ಲದೆ, ಈ ಪ್ರಕರಣದ ಆರೋಪಿಗಳ ವಿರುದ್ಧ ಅಕ್ರಮ ಮದ್ಯ ಮತ್ತು ಮಾದಕವಸ್ತು ವ್ಯಾಪಾರ ಕುರಿತು ಈ ಹಿಂದೆ ದಾಖಲಾಗಿದ್ದ ದೂರಿನ ಬಗ್ಗೆಯೂ ಮಹಿಳಾ ಆಯೋಗ ವಿವರಣೆಯನ್ನು ಕೇಳಿದೆ.

ಸಂತ್ರಸ್ತೆ ಮೆರವಣಿಗೆಯ ಮೊಬೈಲ್​ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಸುಮಾರು 10 ರಿಂದ 15 ಮಂದಿಯನ್ನು ಗುರುತಿಸಲಾಗಿದೆ. ಅದರಲ್ಲಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಐದು ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಈ ರೀತಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎನ್ನಲಾಗಿದೆ. ಓರ್ವ ಬಾಲಕ ಈ ಯುವತಿಯನ್ನು ಹಿಂಬಾಲಿಸುತ್ತಿದ್ದ. ಆದರೆ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡ. ಬಾಲಕನ ಆತ್ಮಹತ್ಯೆಗೆ ಈಕೆಯೇ ಕಾರಣ ಎನ್ನುವ ಕಾರಣಕ್ಕೆ ಕುಟುಂಬದವರು ಈ ಹಲ್ಲೆ ನಡೆಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಸಂತ್ರಸ್ತೆ ವಿವಾಹಿತೆಯಾಗಿದ್ದು, ಒಂದು ಮಗುವಿನ ತಾಯಿ. ಸದ್ಯ ಪ್ರಕರಣದ ಸತ್ಯಾಸತ್ಯತೆ ಬಹಿರಂಗಗೊಳ್ಳಬೇಕಿದೆ.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

33 seconds ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

24 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

39 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago