ನವದೆಹಲಿ : 5 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎನ್ ಟಿ ಎ ಜಿ ಐ ಶಿಫಾರಸು ಆಗತ್ಯವಾಗಿದ್ದು, ಅದು ಒಪ್ಪಿಗೆ ನೀಡುವವರೆಗೆ ಕಾಯುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಆರೋಗ್ಯ ಸಚಿವರು, ‘5 ರಿಂದ 12 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ಎನ್ ಟಿಎಜಿಐ ಶಿಫಾರಸು ಮಾಡುವವರೆಗೆ ಆರೋಗ್ಯ ಸಚಿವಾಲಯ ಕಾಯುತ್ತದೆ’ ಎಂದು ಹೇಳಿದರು.
ಶಾಲೆಗಳಲ್ಲಿ ಕೋವಿಡ್ -19 ಪ್ರಕರಣಗಳಲ್ಲಿನ ಏರಿಕೆಯ ನಡುವೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಇತ್ತೀಚೆಗೆ 6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಿದೆ.
5 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ಗೆ ತುರ್ತು ಬಳಕೆಯ ಅಧಿಕಾರವನ್ನ ಡಿಸಿಜಿಐ ನೀಡಿದೆ. ಪ್ರಸ್ತುತ 12-14 ವರ್ಷ ವಯಸ್ಸಿನವರಿಗೆ ಲಸಿಕೆಯನ್ನು ನೀಡಲಾಗುತ್ತಿದೆ.
ಇದಲ್ಲದೆ, ಝೈಡಸ್ ಕ್ಯಾಡಿಲಾ ಲಸಿಕೆ ಝೈಕೋವ್ಡಿಯನ್ನ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಎರಡು ಡೋಸ್ ನಿಯಮಾವಳಿಗಾಗಿ ಅನುಮೋದಿಸಲಾಗಿದೆ.