Categories: ದೆಹಲಿ

ಸರ್ಕಾರಿ ಶಾಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯ

ನವದೆಹಲಿ : ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಆರೋಗ್ಯಕ್ಕಾಗಿ ಮಧ್ಯಾಹ್ನದ ಊಟದ ಯೋಜನೆಯಡಿಯಲ್ಲಿ ಸಾರವರ್ಧಿತ ಅಕ್ಕಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ಹೀಗಾಗಿ ಊಟಕ್ಕಾಗಿ ಬಳಕೆ ಮಾಡುವ ಅಕ್ಕಿಯ ಸಾಕಷ್ಟು ದಾಸ್ತಾನು ಇದ್ದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ ಅಕ್ಕಿ ಯನ್ನು ಬಳಸಲು ಕೇಂದ್ರ ಸರ್ಕಾರ  ಹಸಿರು ನಿಶಾನೆ ತೋರಿದ್ದು, ಅದರ ಬಳಕೆಯನ್ನು ತ್ವರಿತಗೊಳಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಖಾಸಗಿ ಮಾಧ್ಯಮವೊಂದರ ವರದಿ ಪ್ರಕಾರ ಕೇಂದ್ರ ಶಿಕ್ಷಣ ಸಚಿವಾಲಯವು ಅಕ್ಟೋಬರ್ 20 ರಂದು ಈ ವಿಷಯದ ಬಗ್ಗೆ ರಾಜ್ಯಗಳಿಗೆ ಪತ್ರ ಬರೆದಿದೆ. ಅದರ ಪತ್ರದಲ್ಲಿ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮುಗಳಿಂದ ವಿಶೇಷವಾಗಿ ಮಧ್ಯಾಹ್ನದ ಊಟಕ್ಕಾಗಿ ಸಾರವರ್ಧಿತ ಅಕ್ಕಿಯ ಸರಕುಗಳನ್ನು ತರುವಂತೆ ಹೇಳಿದೆ ಎನ್ನಲಾಗಿದೆ. ಫೋರ್ಟಿಫೈಡ್ ಅಕ್ಕಿ ದಾಸ್ತಾನು ಹೆಚ್ಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ಕಾರ್ಯದರ್ಶಿ ಆರ್.ಸಿ.ಮೀನಾ ಅವರು ರಾಜ್ಯ ಶಿಕ್ಷಣ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರಂತೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 2024 ರ ವೇಳೆಗೆ ಪಡಿತರ ಅಂಗಡಿಗಳಲ್ಲಿ ಮತ್ತು ಮಧ್ಯಾಹ್ನದ ಊಟದಲ್ಲಿ ಮತ್ತು ಶಿಶುಗಳು ಮತ್ತು ಹಾಲುಣಿಸುವ ತಾಯಂದಿರನ್ನು ಒಳಗೊಂಡಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಕೇವಲ ಬಲವರ್ಧಿತ ಅಕ್ಕಿಯನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದರು.

Gayathri SG

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

7 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

7 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

7 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

7 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

8 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

8 hours ago