Categories: ದೆಹಲಿ

ಸಿಲೆಂಡರ್ ಗಳ ದರ ಮತ್ತೆ 25 ರೂಪಾಯಿ ಹೆಚ್ಚಳ

ದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೆ ಮುಟ್ಟಿರುವ ಈ ಸಮಯದಲ್ಲಿ ಎಲ್ ಪಿಜಿ ಸಿಲೆಂಡರ್ ಗಳ ಬೆಲೆ ಕೂಡ ಹೆಚ್ಚಳವಾಗಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಹೌದು.. ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ. ಹೊಸ ದರ ಇಂದೇ ಜಾರಿಗೆ ಬರಲಿದೆ.

ಈ ಮೊದಲು, ಎಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಆಗಸ್ಟ್ 18, 2021 ರಂದು 25 ರೂ. ಏರಿಸಲಾಗಿತ್ತು. ಅದಕ್ಕೂ ಮೊದಲು ಜುಲೈ 1, 2021 ರಂದು 25.50 ರೂ. ಹೆಚ್ಚಿಸಲಾಗಿತ್ತು.

ಇನ್ನು ದೆಹಲಿಯಲ್ಲಿ 19 ಕೆ.ಜಿ. ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದ್ದು,1, 693 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 862 ರೂಪಾಯಿ 50 ಪೈಸೆಗೆ ಏರಿಕೆಯಾಗಿದೆ.

Sneha Gowda

Recent Posts

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

4 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

10 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

20 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

30 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

47 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

58 mins ago