News Karnataka Kannada
Wednesday, May 01 2024
ದೆಹಲಿ

ಸುಪ್ರೀಂ ಕೋರ್ಟ್‌ ಆವರಣದಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಇಬ್ಬರು ; ಪುರುಷನ ಸ್ಥಿತಿ ಗಂಭೀರ

Supreme Court 30 6 21
Photo Credit :

 

ನವದೆಹಲಿ: ಸುಪ್ರೀಂಕೋರ್ಟ್ ಮುಂಭಾಗದಲ್ಲಿಯೇ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ಕೋರ್ಟ್ ಗೇಟ್ ‘ಡಿ’ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸದ್ಯ ಇಬ್ಬರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರು ಸುಪ್ರೀಂಕೋರ್ಟ್ ಆವರಣ ಪ್ರವೇಶಿಸಲು ಮುಂದಾಗಿದ್ದರು. ಆದ್ರೆ ಭದ್ರತಾ ಸಿಬ್ಬಂದಿ ಗುರುತಿನ ಚೀಟಿ ಇಲ್ಲದ ಹಿನ್ನೆಲೆ ಇಬ್ಬರನ್ನು ತಡೆದಿದ್ದರು. ಈ ಸಮಯದಲ್ಲಿ ಗೇಟ್ ಮುಂಭಾಗದಲ್ಲಿ ನಿಂತಿದ್ದ ಇಬ್ಬರು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದರು. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಮತು ಪೊಲೀಸರು ಇಬ್ಬರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪುರುಷನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.  ಇಬ್ಬರು ಸಂಸದ ಅತುಲ್ ರಾಯ್ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಯುವತಿ ಗೆಳೆಯನ ಜೊತೆ ನ್ಯಾಯಾಲಯಕ್ಕೆ ಆಗಮಿಸಿದ್ದಾಗ ಸಿಬ್ಬಂದಿ ಪ್ರವೇಶ ನೀಡದ ಹಿನ್ನೆಲೆ ಈ ನಿರ್ಧಾರಕ್ಕೆ ಬಂದಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಸದ್ಯ ಅತುಲ್ ರಾಯ್ ರೇಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು