ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸ್ಮಾರಕದ ಮೂಲಕ ಪ್ರತೀಯೊಬ್ಬ ಭಾರತೀಯನೂ ದೇಶಕ್ಕೆ ನೇತಾಜಿಯವರು ನೀಡಿರುವ ಕೊಡುಗೆ ಬಗ್ಗೆ ಹೆಮ್ಮೆ ಪಡುತ್ತಾನೆಂದು ಭಾನುವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲಾ ಜನತೆಗೆ ಪರಾಕ್ರಮ್ ದಿನ ಹಬ್ಬದ ಶುಭಾಶಯಗಳು. ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ವಾರ್ಷಿಕೋತ್ಸವದಂದು ಗೌರವಾನ್ವಿತ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಅವರ ಜಯಂತಿಯಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ನಮಸ್ಕರಿಸುತ್ತೇನೆ. ಸ್ಮಾರಕದ ಮೂಲಕ ಪ್ರತೀಯೊಬ್ಬ ಭಾರತೀಯನೂ ದೇಶಕ್ಕಾಗಿ ನೇತಾಜಿ ನೀಡಿರುವ ಕೊಡುಗು ಕುರಿತು ಹೆಮ್ಮೆಪಡುತ್ತಾನೆಂದು ಹೇಳಿದ್ದಾರೆ.