Categories: ದೆಹಲಿ

ಸೆ.23ರಿಂದ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಸೆ.23ರಿಂದ ಅಮೆರಿಕ ಭೇಟಿ ಕೈಗೊಳ್ಳಲಿದ್ದು, ದ್ವಿಪಕ್ಷೀಯ ನಂಟನ್ನು ಬಲಗೊಳಿಸುವಲ್ಲಿ ಈ ಭೇಟಿ ಮಹತ್ವದ್ದಾಗಿದೆ ಎಂದು ನಂಬಲಾಗಿದೆ. ಈ ಭೇಟಿಯ ವೇಳೆ ಅಮೆರಿಕ ಅಧ್ಯಕ್ಷ ಜೋಯಿ ಬೈಡೆನ್ , ಕ್ವಾಡ್ ಶೃಂಗಸಭೆ , ವಿಶ್ವಸಂಸ್ಥೆ ಮಹಾವೇಶನದಲ್ಲಿ ಸೆ.25ರಂದು ಪ್ರಧಾನಿ ಮೋದಿಯವರ ಭಾಷಣ ಪ್ರಮುಖ ಕಾರ್ಯಕ್ರಮಗಳಾಗಿವೆ.

ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಸರಕಾರ ರಚನೆ ಯತ್ನ ನಡೆಯುತ್ತಿರುವ ನಿರ್ಣಾಯಕ ಸಂದರ್ಭದಲ್ಲೇ ಪ್ರಧಾನಿ ಮೋದಿಯವರ ಮೂರು ದಿನಗಳ ಅಮೆರಿಕ ಭೇಟಿ ಗಮನ ಸೆಳೆದಿದೆ. ಅಲ್ಲಿ ಅವರು ಅಧ್ಯಕ್ಷ ಬೈಡೆನ್ ಮತ್ತು ಇತರ ಉನ್ನತ ಅಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಬೈಡೆನ್ ಅಧ್ಯಕ್ಷರಾದ ಬಳಿಕ ಮೋದಿಯವರು ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದು, ಅಫ್ಘಾನಿಸ್ಥಾನ ಬೆಳವಣಿಗೆ, ಕೋವಿಡ್-19, ಹವಾಮಾನ ಬದಲಾವಣೆ, ಇಂಡೋ-ಪೆಸಿಫಿಕ್, ಭಯೋತ್ಪಾದನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮೋದಿ -ಬೈಡೆನ್ ಮಾತುಕತೆ ನಡೆಸಲಿದ್ದಾರೆ.

ಹಾಗೆಯೇ 9/11ರ ಭಯೋತ್ಪಾದಕ ದಾಳಿಯ 20ನೇ ವರ್ಷಾಚರಣೆ ಸಂದರ್ಭದಲ್ಲಿ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿರುವುದು ಕೂಡಾ ಮಹತ್ವದ್ದಾಗಿದೆ.ಮೋದಿ ಭೇಟಿ ಕಾರ್ಯಕ್ರಮ ವೇಳಾಪಟ್ಟಿ ನಿಗದಿ ತಂಡ ಸೆ.9ರಂದೇ ಅಲ್ಲಿಗೆ ತೆರಳುತ್ತಿದೆ.ಮೋದಿ -ಬೈಡೆನ್ ದ್ವಿಪಕ್ಷೀಯ ಮಾತುಕತೆ ಸೆ.23ರಂದು ನಡೆಯಲಿದೆ. ಅದರ ಮರುದಿನ ಕ್ವಾಡ್ ಭದ್ರತಾ ಮಾತುಕತೆ ನಡೆಯಲಿದೆ.
ಸೆ.೨೫ರಂದು ಮೋದಿಯವರು ವಿಶ್ವಸಂಸ್ಥೆ ಮಹಾವೇಶನ(ಉಂಗಾ)ವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಬಾಂಗ್ಲಾಕ್ಕೆ ಭೇಟಿ ನೀಡಿದ ಬಳಿಕ ಅವರ ಮೊದಲ ಅಂತಾರಾಷ್ಟ್ರೀಯ ಭೇಟಿಯಾಗಿದೆ.

Sneha Gowda

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

8 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

13 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

27 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

34 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

44 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

55 mins ago