Categories: ದೆಹಲಿ

ಸ್ಪುಟ್ನಿಕ್ ಲೈಟ್ ಲಸಿಕೆಗೆ ಭಾರತದಲ್ಲಿ ಶಿಫಾರಸ್ಸು ನೀಡಿದ ಡಿಸಿಜಿಐ

ನವದೆಹಲಿ: ರಷ್ಯಾದ ಸ್ಪುಟ್ನಿಕ್ ಲೈಟ್ ಲಸಿಕೆಯ ಒಂದು ಡೋಸ್ ಅನ್ನು ಪಡೆದುಕೊಳ್ಳುವುದಕ್ಕೆ ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣಕ್ಕೆ ಈಗಾಗಲೇ ಹಲವು ಲಸಿಕೆಗಳನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ರೂಪಾಂತರಿಗಳ ವಿರುದ್ಧ ಸಮರ್ಥವಾಗಿ ಹೋರಾಡಲು ರಷ್ಯಾದ ಮತ್ತೊಂದು ಲಸಿಕೆಗೆ ಡಿಸಿಜಿಐ ಶಿಫಾರಸ್ಸು ಮಾಡಿದೆ.

ಈ ಹಿಂದೆ ಕೊವಿಡ್ -19 ಸಾಂಕ್ರಾಮಿಕದ ಕಾಲದಲ್ಲಿ ರಷ್ಯಾದ ಸ್ಪುಟ್ನಿಕ್ ಲೈಟ್ ಲಸಿಕೆಯ ಮೊದಲ ಡೋಸ್ ಮೂರು ತಿಂಗಳಲ್ಲಿ ವೈರಸ್‌ನ ಡೆಲ್ಟಾ ರೂಪಾಂತರದ ವಿರುದ್ಧ ಶೇ.70ರಷ್ಟು ಪರಿಣಾಮಕಾರಿಯಾಗಿ ರಕ್ಷಣೆ ನೀಡಲಿದೆ. ಸ್ಪುಟ್ನಿಕ್ ಲೈಟ್ ಲಸಿಕೆ 60 ಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇಕಡಾ 75ಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿದೆ.

ಜಗತ್ತಿನಲ್ಲೇ ಮೊದಲು ಅನುಮೋದನೆ ಪಡೆದ ಲಸಿಕೆ ಸ್ಪುಟ್ನಿಕ್-ವಿ: ರಷ್ಯಾದ ಸ್ಪುಟ್ನಿಕ್ ಲೈಟ್ ಲಸಿಕೆ ಮಾನವ ಅಡೆನೊವೈರಸ್ ಸೆರೊಟೈಪ್ 26 ಅನ್ನು ಆಧರಿಸಿದೆ. ಕೊರೊನಾವೈರಸ್ ವಿರುದ್ಧ ಜಗತ್ತಿನಲ್ಲೇ ಮೊದಲು ಅನುಮೋದನೆ ಪಡೆದ ಲಸಿಕೆ ಸ್ಪುಟ್ನಿಕ್-ವಿ ಆಗಿದೆ. ಇಂದು ಜಗತ್ತಿನ 70 ರಾಷ್ಟ್ರಗಳಲ್ಲಿ ಕೊವಿಡ್-19 ವಿರುದ್ಧ ಸ್ಪುಟ್ನಿಕ್-ವಿ ಲಸಿಕೆಯನ್ನು ಬಳಸುವುದಕ್ಕೆ ಅನುಮತಿ ನೀಡಲಾಗಿದೆ. ಒಂದು ಡೋಸ್ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು 15ಕ್ಕೂ ಹೆಚ್ಚು ದೇಶಗಳಲ್ಲಿ ಅಧಿಕೃತಗೊಳಿಸಲಾಗಿದ್ದು, ಇನ್ನೂ 30 ದೇಶಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ.

 

Swathi MG

Recent Posts

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

5 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago